ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿಲ್ಲ : ಜೇಟ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

Arun-Jaitly--1

ನವದೆಹಲಿ, ಆ.29- ಫ್ರಾನ್ಸ್‍ನಿಂದ 36, ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರೀ ಅಕ್ರಮ ಅವ್ಯವಹಾರಗಳು ನಡೆದಿವೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ , ಈ ವಿಷಯದಲ್ಲಿ ಆ ಪಕ್ಷವು ದೇಶದ ಭದ್ರತೆ ವಿಷಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

ಫೇಸ್‍ಬುಕ್ ಬ್ಲಾಗ್‍ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಜೇಟ್ಲಿ ರಫೇಲ್ ಜೆಕ್ ಖರೀದಿ ವಿಷಯದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. 2007ರಲ್ಲಿ ಯುಪಿಎ ಸರ್ಕಾರ ಮಾಡಿಕೊಂಡಿದ್ದ ಒಪ್ಪಂದಕ್ಕಿಂತಲೂ ಅತ್ಯಂತ ಕಡಿಮೆ ಮತ್ತು ಉತ್ತಮ ದರದೊಂದಿಗೆ ಈ ವಹಿವಾಟು ನಡೆದಿದೆ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಈ ವಿಷಯದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಸುರಕ್ಷತೆಯೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅವರು ಕಿಡಿಕಾರಿದರು.

Facebook Comments

Sri Raghav

Admin