ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Dayalu

ಚೆನ್ನೈ (ಪಿಟಿಐ), ಆ.29-ದಿವಂಗತ ಮಾಜಿ ಮುಖ್ಯಮಂತ್ರಿ ಡಾ.ಎಂ.ಕರುಣಾನಿಧಿ ಅವರ ಪತ್ನಿ ಹಾಗೂ ಡಿಎಂಕೆ ನೂತನ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ತಾಯಿ ದಯಾಳು ಅಮ್ಮಾಳ್ ಅವರನ್ನು ಅನಾರೋಗ್ಯದಿಂದ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಅಮ್ಮಾಳ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಿನ್ನೆ ಮಧ್ಯ ರಾತ್ರಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ಸೇರಿಸಲಾಯಿತು. ಅವರ ಆರೋಗ್ಯ ಸ್ಥಿತಿ ಬಗ್ಗೆ ವಿವರ ನೀಡಲು ನಿರಾಕರಿಸಿರುವ ಆಸ್ಪತ್ರೆ ವೈದ್ಯರು, ಈ ಬಗ್ಗೆ ಸಂಜೆ ಅಧಿಕೃತ ಹೇಳಿಕೆ ನೀಡುವುದಾಗಿ ಹೇಳಿದ್ದಾರೆ.  ಆಗಸ್ಟ್ 7ರಂದು ಕರುಣಾನಿಧಿ ಅವರು ನಿಧನರಾದ ನಂತರ ಅಮ್ಮಾಳ್ ಅವರ ಆರೋಗ್ಯ ಕ್ಷೀಣಿಸಿತ್ತು. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ತೀವ್ರ ಅಸ್ವಸ್ಥರಾದರೆಂದು ಕುಟುಂಬದ ಮೂಲಗಳು ತಿಳಿಸಿವೆ.

Facebook Comments

Sri Raghav

Admin