ಕ್ರೀಡೆಗೆ ಮತ್ತು ಫಿಟ್ನೆಸ್‍ಗೆ ಹೆಚ್ಚು ಆದ್ಯತೆ ನೀಡುವಂತೆ ಜನರಿಗೆ ಮೋದಿ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

Modi-Sports--Fitness

ನವದೆಹಲಿ (ಪಿಟಿಐ), ಆ.29-ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಕ್ರೀಡಾಪಟುಗಳಿಗೆ ಶುಭ ಕೋರಿ, ಅವರ ಸಾಧನೆಗಳನ್ನು ಶ್ಲಾಘಿಸಿದ್ದಾರೆ. ಕಾಮನ್‍ವೆಲ್ತ್ ಕೀಡಾಕೂಟ ಹಾಗೂ ಏಷ್ಯನ್ ಗೇಮ್ಸ್ ಸೇರಿದಂತೆ ವಿದಿಧ ಪಂದ್ಯಾವಳಿಗಳಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿರುವುದರಿಂದ ಈ ವರ್ಷ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಭಾರತಕ್ಕೆ ಮಹತ್ವದ್ದಾಗಿದೆ ಎಂದು ಮೋದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದ ಜನರು ಕ್ರೀಡೆಗಳು ಮತ್ತು ಫಿಟ್ನೆಸ್‍ಗೆ ಸಂಬಂಧಪಟ್ಟ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಇದರಿಂದ ಆರೋಗ್ಯಕರ ಭಾರತಕ್ಕೆ ಕೊಡುಗೆ ನೀಡಲು ಸಹಕಾರಿ ಎಂದು ತಿಳಿಸಿದ್ದಾರೆ.

ವಿವಿಧ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಎಲ್ಲರನ್ನು ನಾನು ಗೌರವಿಸುತ್ತೇನೆ. ಅವರ ಪ್ರತಿಭೆ, ಪರಿಶ್ರಮ ಹಾಗೂ ಸಾಧನೆಯು ಹಲವಾರು ಮೈಲಿಗಲ್ಲುಗಳ ಸ್ಥಾಪನೆಗೆ ಕಾರಣವಾಗಿದೆ ಎಂದು ಪ್ರಧಾನಿ ಪ್ರಶಂಸಿಸಿದ್ಧಾರೆ.   ರಾಷ್ಟ್ರೀಯ ಕ್ರೀಡಾ ದಿನವೇ ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಜನ್ಮದಿನ. ಅವರ ಜನ್ಮಜಯಂತಿ ಅಂಗವಾಗಿ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Facebook Comments

Sri Raghav

Admin