ಸುಳ್ಳು ಸುದ್ದಿಗಳಿಗೆ ಲಗಾಮು ಹಾಕಲು ಮುಂದಾದ ಕೇಂದ್ರ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Modi--014
ನವದೆಹಲಿ,ಆ.30- ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸುಳ್ಳು ಸುದ್ದಿಗಳ ಹಾವಳಿ ತಡೆಯಲು ವಿಫಲವಾದ ಸಾಮಾಜಿಕ ಮಾಧ್ಯಮಗಳ ಭಾರತ ವಿಭಾಗದ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.  ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಅವರ ನೇತೃತ್ವದ ಸಮಿತಿಯ ವರದಿ ಸಚಿವ ರಾಜನಾಥ್ ಸಿಂಗ್ ಅವರ ಕೈ ಸೇರಿದೆ. ಇದರಲ್ಲಿ, ಸಂಸತ್ತಿನ ಅನುಮೋದನೆ ಮೂಲಕ ಸದ್ಯ ಇರುವ ಭಾರತೀಯ ದಂಡ ಸಂಹಿತೆಗೆ ಕೆಲ ಅಂಶಗಳನ್ನು ಸೇರ್ಪಡೆ ಮಾಡಿ, ಈ ಮೂಲಕ ಕಾನೂನನ್ನು ಹೆಚ್ಚು ಕಠಿಣ ಗೊಳಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಈ ರಾಜೀವ್ ಗೌಬಾ ಅವರ ವರದಿ ಬಗ್ಗೆ ಸಚಿವರಾದ ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ರವಿಶಂಕರ್ ಪ್ರಸಾದ್, ಥಾವರ್ ಚಂದ್ ಗೆಹ್ಲೋಟ್ ಚರ್ಚೆ ನಡೆಸಲಿದ್ದಾರೆ. ಇದರ ಪ್ರಕಾರ, ಜಾಗತಿಕ ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳು ಭಾರತದಲ್ಲಿದ್ದಾರೆ. ಅವರು ಆಕ್ಷೇಪಾರ್ಹ ವಿಚಾರ ಅಥವಾ ವಿಡಿಯೋಗಳನ್ನು ತಮ್ಮ ವೆಬ್‍ಸೈಟ್‍ನಿಂದ ತೆಗೆದು ಹಾಕದಿದ್ದಲ್ಲಿ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗಿದೆ¿ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin