ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ನಕಲಿ ಫೇಸ್‍ಬುಕ್ ಖಾತೆ ತೆರದು ಕಿರುಕುಳ

ಈ ಸುದ್ದಿಯನ್ನು ಶೇರ್ ಮಾಡಿ

Vijayalakshmi--01

ಬೆಂಗಳೂರು, ಆ.30- ಕಿಡಿಗೇಡಿಗಳು ಫೇಸ್‍ಬುಕ್‍ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ನನ್ನ ಭಾವಚಿತ್ರಗಳನ್ನು ಹಾಕಿ ಅವಹೇಳನಕಾರಿ ಪೊೀಸ್ಟ್ ಮಾಡಿದ್ದಾರೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಂ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ. ಕೆಲವು ದಿನಗಳ ಹಿಂದೆ ಫೇಸ್ ಬುಕ್‍ನಲ್ಲಿ ನನ್ನ ಭಾವಚಿತ್ರ ಹಾಕಿ ನಕಲಿ ಖಾತೆ ತೆರೆದು ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಲಾಗಿದೆ. ಈ ಮೂಲಕ ತಮ್ಮ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ.ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಜಯಲಕ್ಷ್ಮೀ ದೂರಿನಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin