ಹಾಸನ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

Pritam-Gowda--01

ಹಾಸನ. ಆ.31 : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹಾಸನ ಶಾಸಕ ಪ್ರೀತಮ್ ಗೌಡ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಮಧ್ಯ ರಾತ್ರಿ 8ನೇ ವಾರ್ಡಿನ ಅಭ್ಯರ್ಥಿಯಾಗಿರುವ ವೇಣುಗೋಪಾಲ್ ಅಕ್ರಮ ಮದ್ಯ ಹಂಚಿಕೆ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮದ್ಯ ಹಂಚುತ್ತಿದ್ದ ವೇಳೆ ವೇಣುಗೋಪಾಲ ಸೇರಿ 3 ಮಂದಿಯನ್ನ ವಶಕ್ಕೆ ಪಡೆದು ಠಾಣೆಗೆ ಕರೆತಂದು ದೂರು ಕೂಡ ದಾಖಲು ಮಾಡಿದ್ದರು.

ಈ ಕಾರಣದಿಂದ ತಡರಾತ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಶಾಸಕ ಪ್ರೀತಮ್ ಗೌಡ ತಮ್ಮ ಅಭ್ಯರ್ಥಿಯನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಆದರೆ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಮದ್ಯ ನೀಡುವ ಮೂಲಕ ಆಮಿಷ ಒಡ್ಡುತ್ತಿದ್ದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ ಎಂದರೂ ಕೂಡ ಕೇಳದ ಶಾಸಕ ಮತ್ತು ಆತನ ಬೆಂಬಲಿಗರು ಪೊಲೀಸರಿಗೆ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇಷ್ಟಾದರೂ ಆರೋಪಿಗಳನ್ನು ಬಲವಂತದಿಂದ ಕಾನೂನು ಬಾಹಿರವಾಗಿ ಪೊಲೀಸ್ ಠಾಣೆಯಿಂದ ರಾತ್ರಿಯೇ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಾತ್ರಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಸಕ ಪ್ರಿತಂಗೌಡ ವಿರುದ್ಧ 143, 353, 225ರಡಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin