ದೇಶಪಾಂಡೆ ಅವರಿಗೂ ಸಿಎಂ ಆಗುವ ಅರ್ಹತೆ ಇದೆ ಎಂಬ ಹೆಚ್ಡಿಕೆ ಹೇಳಿಕೆ ಬಗ್ಗೆ ಗೌಡರು ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Devegowda--0202
ಬೆಂಗಳೂರು, ಆ.31- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದು ಹಳೆಯ ವಿಚಾರ. ಮಾಜಿ ಮುಖ್ಯಮಂತ್ರಿ ದಿ.ಧರ್ಮಸಿಂಗ್ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ಅಂತಹ ಪ್ರಸ್ತಾಪ ಬಂದಿತ್ತು.

ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ನಾನೂ ಮತ್ತು ದೇಶಪಾಂಡೆ ಅವರು ಒಟ್ಟಿಗೆ ಕೆಲಸ ಮಾಡಿದ್ದೇವೆ. ಈಗ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಬೇಡ ಎಂದರು. ಬ್ರಿಟೀಷ್ ಹೈ ಕಮೀಷನರ್ ಡೊನಾಲ್ಡ್ ಮೈಕ್ ಅಲಿಸ್ಟರ್ ಅವರು ಸೌಜನ್ಯದ ಭೇಟಿ ಮಾಡಿದ್ದರು.

ರಾಜ್ಯದ ಸಮ್ಮಿಶ್ರ ಸರ್ಕಾರ ಬಿದ್ದು ಹೋಗಲಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲು ಜೆಡಿಎಸ್, ಕಾಂಗ್ರೆಸ್ ಎರಡೂ ಪಕ್ಷಗಳು ಸಿದ್ದವಿಲ್ಲ ಎಂದು ಕೂಡ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಕರ್ನಾಟಕದಲ್ಲಿ ಕೆಲವು ಗೊಂದಲಗಳಿವೆ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಬ್ರಿಟೀಷ್ ಹೈಕಮೀಷನರ್ ತಮ್ಮನ್ನು ಭೇಟಿ ಮಾಡಿದ್ದರು ಎಂದು ತಿಳಿಸಿದರು. ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ರಾಜಕೀಯ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲು ಅವರು ಬರುತ್ತಾರೆ ಎಂದು ಗೌಡರು ತಿಳಿಸಿದರು.

Facebook Comments

Sri Raghav

Admin