ಕೊಡಗಿಗಿ 2000 ಕೋಟಿ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿ ರ‍್ಯಾಲಿ

ಈ ಸುದ್ದಿಯನ್ನು ಶೇರ್ ಮಾಡಿ

vatal-nagaraj
ಬೆಂಗಳೂರು, ಆ.31- ನೆರೆ ಹಾವಳಿಯಿಂದ ತತ್ತರಿಸಿಹೋಗಿರುವ ಕೊಡಗಿನ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ರೂ.ಗಳನ್ನು ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕೊಡಗಿಗೆ ಆಗಮಿಸಿ ಅವಲೋಕನ ನಡೆಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಕೊಡಗಿಗೆ ಬೃಹತ್ ರ್ಯಾಲಿ ನಡೆಸಲಾಯಿತು. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಕೊಡಗಿನವರೆಗೆ ವಾಹನಗಳ ಮೂಲಕ ಕೈಗೊಂಡ ರ್ಯಾಲಿಯಲ್ಲಿ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಶಿವರಾಮೇಗೌಡ, ಪ್ರವೀಣ್‍ಕುಮಾರ್ ಶೆಟ್ಟಿ, ಮಂಜುನಾಥ್ ದೇವು ಮುಂತಾದವರು ಪಾಲ್ಗೊಂಡಿದ್ದರು. ಕೊಡಗಿನ ಜನರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು. ಪ್ರಕೃತಿ ವಿಕೋಪದಲ್ಲಿ ಪ್ರಾಣ ಕಳೆದುಕೊಂಡವರಿಗೆ 25 ಲಕ್ಷ ರೂ. ಕೊಡಬೇಕು. ನಿರಾಶ್ರಿತರನ್ನು ವಿಳಂಬ ಮಾಡದೆ ನೆರವು ನೀಡಬೇಕೆಂದು ಆಗ್ರಹಿಸಲಾಯಿತು.
ನೆರೆಯ ಕೇರಳದಲ್ಲಿ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸಿದ ಮಾದರಿಯಲ್ಲಿಯೇ ಕೇಂದ್ರ ಸರ್ಕಾರ ಕೊಡಗಿಗೂ ಸ್ಪಂದಿಸಬೇಕೆಂದು ಆಗ್ರಹಿಸಿದರು.

Facebook Comments