ನಾಗರಿಕ ಸ್ನೇಹಿ ಕೆಎಸ್‌ಆರ್‌ಟಿಸಿಗೆ ಇ-ಆಡಳಿತ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

KSRTC

ಬೆಂಗಳೂರು, ಸೆ.1-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮತ್ತೊಂದು ಪ್ರಶಸ್ತಿಯ ಗರಿ ಮೂಡಿದೆ. ನಾಗರಿಕ ಸ್ನೇಹಿ ಇ-ಆಡಳಿತ ಯೋಜನೆಗಳನ್ನು ರಾಜ್ಯಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳ ಹಾಗೂ ಸಂಸ್ಥೆಗಳಿಗೆ ರಾಜ್ಯ ಮಟ್ಟದ ಇ-ಆಡಳಿತ ಪ್ರಶಸ್ತಿಯು ಕೆಎಸ್‍ಆರ್‍ಟಿ ಅನುಷ್ಠಾನಗೊಳಿಸಿರುವ  staff Duty Rota and Leave Management System  ಉಪಕ್ರಮಕ್ಕೆ  Excellence in Government  Process  Re-engineering   ವರ್ಗದಲ್ಲಿ ಲಭಿಸಿದೆ. ಪ್ರಶಸ್ತಿಯ ಮೊತ್ತ 5 ಲಕ್ಷ ರೂ.ನಗದು ಬಹುಮಾನವನ್ನು ಒಳಗೊಂಡಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin