ಬೋರ್‍ವೆಲ್‍ ವಿದ್ಯುತ್ ಸಂಪರ್ಕಕ್ಕೆ ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದ ಜೆಸ್ಕಾಂ ಎಇಇ

ಈ ಸುದ್ದಿಯನ್ನು ಶೇರ್ ಮಾಡಿ

ACB

ಬಳ್ಳಾರಿ, ಸೆ.1- ಬೋರ್‍ವೆಲ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಸಂಡೂರಿನ ಜೆಸ್ಕಾಂ ಎಇಇ ವೆಂಕಟೇಶ್ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ಸಂಡೂರಿನ ನಿವಾಸಿಯೊಬ್ಬರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಲಾಗಿದ್ದ ಬೋರ್‍ವೆಲ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಂದಾಜು ವೆಚ್ಚ ತಯಾರಿಸಿ ಕೊಡಲು 5ಸಾವಿರ ರೂ ಬೇಡಿಕೆ ಇಟ್ಟಿದ್ದು, ಹಣ ಪಡೆಯುತ್ತಿದ್ದಾಗ ಬಳ್ಳಾರಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಹಣ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Facebook Comments