ಪತ್ರಕರ್ತರ ಸಹಕಾರ ಸಂಘಕ್ಕೆ ನಾಳೆ ಮತದಾನ

ಈ ಸುದ್ದಿಯನ್ನು ಶೇರ್ ಮಾಡಿ

Voting

ಬೆಂಗಳೂರು, ಸೆ.1. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ನಾಳೆ ಮತದಾನ ನಡೆಯಲಿದೆ.
ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗಿದ್ದು, ನಾಳೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಕಾರ್ಯಕಾರಿ ಮಂಡಳಿಗೆ ಪರಿಶಿಷ್ಟ ಜಾತಿ, ಪಂಗಡ, ಮಹಿಳೆ ಹಾಗೂ ಹಿಂದುಳಿದ ವರ್ಗದಡಿ ಸ್ಪರ್ಧಿಸಿದ್ದ ಆರು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಚುನಾಯಿತರಾಗಿದ್ದಾರೆ.

ಸಂಘದ ಆಡಳಿತ ಮಂಡಳಿತಯ ಸಾಮಾನ್ಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಏಳುಮಂದಿ ನಿರ್ದೇಶಕರನ್ನು ಚುನಾಯಿಸಬೇಕಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 13 ಮಂದಿ ಸ್ಪರ್ಧಿಗಳಿದ್ದಾರೆ. ನಾಳೆ ಮತದಾನ ಮುಗಿದ ಬಳಿಕ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ನಾಳೆ ಸಂಜೆ ಪ್ರಕಟವಾಗಲಿದೆ. ಮತದಾನ ಮಾಡಲು ಸಂಘದ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗಿದೆ.

Facebook Comments

Sri Raghav

Admin