2018ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

BBMP--01

ಬೆಂಗಳೂರು, ಸೆ.01- ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಹಾಗೂ ಚನ್ನೈ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ನಿಧನಹೊಂದಿದ್ದರಿಂದ ಮುಂದೂಡಲಾಗಿದ್ದ ಬಿಬಿಎಂಪಿ ನೀಡುವ 2018ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಬಿಬಿಎಂಪಿಯ ಗಾಜಿನ ಮನೆಯಲ್ಲಿ ನಡೆಯಿತು.

ಈ ಸಂಜೆ ಪತ್ರಿಕೆ ಮತ್ತು ಅರಗಿಣಿ ಸಿನಿಮಾ ವಾರಪತ್ರಿಕೆಯ ಪತ್ರಿಕೆಯ ವಿಶೇಷ ಪ್ರತಿನಿಧಿ ಎನ್.ಎಸ್.ರಾಮಚಂದ್ರ, ಛಾಯಾಗ್ರಾಹಕ ಚಂದ್ರಶೇಖರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಸಲ್ಲಿಸಿದ  ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ , ಉಪಮೇಯರ್ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.  ಪ್ರಶಸ್ತಿ ಪುರಸ್ಕೃತರಿಗೆ ನಾಡಪ್ರಭು ಕೆಂಪೇಗೌಡರ ಅಶ್ವಾರೂಢ ಪ್ರತಿಮೆ, ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ  ನೀಡಲಾಯಿತು.

BBMP--01

Facebook Comments

Sri Raghav

Admin