ಅರಮನೆಯಲ್ಲಿ ದಸರಾ ಆನೆಗಳ ಸ್ವಾಗತ ಕಾರ್ಯಕ್ರಮ ಸೆ.5ಕ್ಕೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

dasara
ಮೈಸೂರು, ಸೆ.2- ನಾಳೆ ಮೈಸೂರು ಅರಮನೆ ಆವರಣದಲ್ಲಿ ನಡೆಯಬೇಕಿದ್ದ ದಸರಾ ಆನೆಗಳ ಸ್ವಾಗತ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ನಾಳೆ ಮೈಸೂರು ಮಹಾನಗರ ಪಾಲಿಕೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಗಜಪಡೆ ಸ್ವಾಗತವನ್ನು ಸೆ.5ಕ್ಕೆ ಮುಂದೂಡಲಾಗಿದೆ.

ಅಂದು ಸಂಜೆ 4.30ಕ್ಕೆ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನ್ ನೇತೃತ್ವದ ಗಜಪಡೆಯನ್ನು ಸ್ವಾಗತಿಸಲಾಗುವುದು ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ತಿಳಿಸಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರ ನೇತೃತ್ವದಲ್ಲಿ ಗಜಪಡೆ ಸ್ವಾಗತ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯಲ್ಲಿ ಶಾಸಕ ರಾಮದಾಸ್ ವಹಿಸಲಿದ್ದಾರೆ ಹಾಗೂ ಇತರೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Facebook Comments

Sri Raghav

Admin