ಪಾಕ್‍ ಮುಟ್ಟಿ ನೋಡಿಕೊಳ್ಳುವಂತೆ ಮತ್ತೆ ಬಿಸಿ ಮುಟ್ಟಿಸಿದ ಅಮೇರಿಕ..!

ಈ ಸುದ್ದಿಯನ್ನು ಶೇರ್ ಮಾಡಿ

Pakistan-And-America
ವಾಷಿಂಗ್ಟನ್, ಸೆ.2-ಪಾಕಿಸ್ತಾನದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪ್ರಧಾನಿ ಇಮ್ರಾನ್ ಖಾನ್ ನೇತ್ರತ್ವದ ಹೊಸ ಸರ್ಕಾರಕ್ಕೆ ಅಮೆರಿಕ ಮತ್ತೆ ಬಿಸಿ ಮುಟ್ಟಿಸಿದೆ. ಭಯೋತ್ಪಾದನೆ ನಿಗ್ರಹ ವಿಷಯದಲ್ಲಿ ಪಾಕಿಸ್ತಾನ ವಿಫಲವಾಗಿರುವುದಕ್ಕೆ 300 ದಶಲಕ್ಷ ಡಾಲರ್ ಭದ್ರತಾ ನೆರವಿಗೆ ಅಮೆರಿಕ ಕತ್ತರಿ ಹಾಕಿದೆ.

ನಿರೀಕ್ಷೆಯಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ಪಾಕಿಸ್ತಾನಕ್ಕೆ ನೀಡುತ್ತಿದ್ದ ಭದ್ರತಾ ಆರ್ಥಿಕ ನೆರವನ್ನು ರದ್ದುಗೊಳಿಸಿದೆ. ಉಗ್ರರ ದಮನ ವಿಷಯದಲ್ಲಿ ಪಾಕಿಸ್ತಾನದ ನಿರಾಶಾದಾಯಕ ಯತ್ನಕ್ಕೆ ಅಮೆರಿಕ ತೀವ್ರ ಆಕ್ರೋಶ ವ್ಯಕ್ತಪಡಿಸಿ 300 ಮಿಲಿಯನ್ ಡಾಲರ್ ನೆರವು ಸ್ಥಗಿತಗೊಳಿಸಿ ಮತ್ತೊಮ್ಮೆ ಚುರುಕು ಮುಟ್ಟಿಸಿದೆ.

ಈ ಬಗ್ಗೆ ಅಮೆರಿಕದ ರಕ್ಷಣಾ ಇಲಾಖೆ ಪೆಂಟಗನ್‍ನಲ್ಲಿ ನಡೆದ ಮಹತ್ವದ ಸಭೈಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿರುವ ಪೆಂಟಗನ್ ವಕ್ತಾರ ಫೆಲ್ ಸೈವಾರ್ಟ್ ಉಗ್ರಗಾಮಿಗಳ ನಿಗ್ರಹ ವಿಷಯದಲ್ಲಿ ಪಾಕಿಸ್ತಾನ ಸರ್ಕಾರದ ಪ್ರಯತ್ನಗಳು ನಿರಾಶಾದಾಯವಾಗಿದೆ. ಈ ಬಗ್ಗೆ ಹಿಂದೆ ಸಾಕಷ್ಟು ಬಾರಿ ಅಮೆರಿಕ ಮನವಿ ಮಾಡಿದ್ದರೂ, ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಆದಕಾರಣ ಟ್ರಂಪ್ ಸರ್ಕಾರ ಅನಿವಾರ್ಯವಾಗಿ 300 ದಶಲಕ್ಷ ಡಾಲರ್ ಆರ್ಥಿಕ ಭದ್ರತಾ ನೆರವು ರದ್ದುಗೊಳಿಸಿದೆ ಎಂದು ತಿಳಿಸಿದರು.

ಅಫ್ಫಾನಿಸ್ತಾನದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಯುದ್ಧಕ್ಕೆ ಕಾರಣವಾಗಿರುವ ಭಯೋತ್ಪಾದಕರು ಪಾಕಿಸ್ತಾನದಲ್ಲಿ ಆಶ್ರಯ ಮತ್ತು ನೆರವು ಪಡೆದಿದ್ದಾರೆ. ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅಮೆರಿಕ ಸರ್ಕಾರ ಪಾಕಿಸ್ತಾನಕ್ಕೆ ಮನವಿ ಮಾಡಿತ್ತು. ಆದರೆ ಪಾಕ್‍ನಿಂದ ಪೂರಕ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಹೇಳಿದರು.

Facebook Comments

Sri Raghav

Admin