ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೊ ವಾಹನ ಪಲ್ಟಿ, 15 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Raichur--01

ರಾಯಚೂರು,ಸೆ.2-ಕೂಲಿ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೊ ವಾಹನ ಪಲ್ಟಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು, 15ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.  ಕೂಲಿ ಕೆಲಸಕ್ಕೆಂದು ಕಾರ್ಮಿಕರನ್ನು ಬುಲೆರೊ ವಾಹನದಲ್ಲಿ ಹಾಲಾಪುರಕ್ಕೆ ಕರೆದೊಯ್ಯುವಾಗ ಬುಲೆರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ಆನಂದಗಲ್ಲು ಬಳಿ ಉರುಳಿಬಿದ್ದಿದೆ.

ಈ ಅಪಘಾತದಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 15ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಲಿಂಗಸಗೂರು, ಪಾವನಕಲ್ಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕಾರ್ಮಿಕರೆಲ್ಲರೂ ತಪ್ಪಲದೊಡ್ಡಿ ಕೋಟ್ನೇಕಲ್ ನಿವಾಸಿಗಳು ಎಂದು ಹೇಳಲಾಗಿದೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin