ಆಲೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರ ಶವ ಕೆರೆಯಲ್ಲಿ ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

Hasaan--01

ಹಾಸನ, ಸೆ.3- ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಆಲೂರು ತಾಲೂಕು ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿದ್ದ ಚನ್ನೇನಹಳ್ಳಿ ಗ್ರಾಮದ ಪಿ.ಟಿ.ಪಾಲಾಕ್ಷ ಆಲೂರು ಅವರ ಶವ ವಾಟೆಹಳ್ಳಿ ಜಲಾಶಯದ ಸಮೀಪ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಮೇಲ್ನೋಟಕ್ಕೆ ಕಂಡುಬಂದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಇವರ ಬಗ್ಗೆ ಆರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲವಾರು ಕಡೆ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಮುಂಜಾನೆ ಪಾಲಾಕ್ಷ ಅವರ ಮೃತದೇಹ ನೀರಿನಲ್ಲಿ ತೇಲುತ್ತಿರುವ ಬಗ್ಗೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ದಾವಿಸಿ ಶವವನ್ನು ಮೇಲೆತ್ತಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin