ಮಚ್ಚಿನಿಂದ ಕೊಚ್ಚಿ ರೌಡಿ ಗುರುಮೂರ್ತಿ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder

ಬೆಂಗಳೂರು,ಸೆ.3- ಖಾಲಿ ನಿವೇಶನವೊಂದರಲ್ಲಿ ದುಷ್ಕರ್ಮಿಗಳು ರೌಡಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಗುರುಮೂರ್ತಿ(27) ಕೊಲೆಯಾದ ವ್ಯಕ್ತಿ. ಬೆಂಗಳೂರು ಹೊರವಲಯದ ವಿಶ್ವೇಶ್ವರ ಲೇಔಟ್‍ನ ಖಾಲಿ ನಿವೇಶನದ ಬಳಿ ಈತನನ್ನು ಮಚ್ಚು ಅಥವಾ ಲಾಂಗ್‍ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇಂದು ಬೆಳಗ್ಗೆ ಕೊಲೆ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈತನ ವಿರುದ್ಧ ಕಾಮಾಕ್ಷಿಪಾಳ್ಯ, ಅನ್ನಪೂರ್ಣೇಶ್ವರಿ ನಗರ, ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಈತನನ್ನು ಯಾರು , ಏತಕ್ಕಾಗಿ ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin