ಚಿತ್ರದುರ್ಗ ನಗರಸಭೆ ಬಿಜೆಪಿ ತೆಕ್ಕೆಗೆ

ಈ ಸುದ್ದಿಯನ್ನು ಶೇರ್ ಮಾಡಿ

BJP--01

ಚಿತ್ರದುರ್ಗ,ಸೆ.3-ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.  ನಗರಸಭೆಯ ಒಟ್ಟು 35 ವಾರ್ಡ್‍ಗಳ ಪೈಕಿ ಬಿಜೆಪಿ 18 ವಾರ್ಡ್‍ಗಳಲ್ಲಿ ಗೆಲ್ಲುವ ಮೂಲಕ ನಗರಸಭೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.  ಕಾಂಗ್ರೆಸ್ 2, ಜೆಡಿಎಸ್ 5 ಹಾಗೂ ಪಕ್ಷೇತರರು 4 ವಾರ್ಡ್‍ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಶಾಸಕ ತಿಪ್ಪಾರೆಡ್ಡಿ ಅವರ ಸತತ ಹೋರಾಟ ಹಾಗೂ ಕಾರ್ಯಕರ್ತರ ಅವಿರತ ಶ್ರಮದಿಂದ ಗೆಲುವಿನ ನಗೆ ಬೀರಿದೆ. ತೀವ್ರ ಪೈಪೋಟಿ ನೀಡಬಹುದೆಂದು ನಿರೀಕ್ಷಿಸಲಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

Facebook Comments

Sri Raghav

Admin