ಹಾಸನಲ್ಲಿ ಮುಂದುವರೆದ ಜೆಡಿಎಸ್ ಪ್ರಾಬಲ್ಯ

ಈ ಸುದ್ದಿಯನ್ನು ಶೇರ್ ಮಾಡಿ

Hassan--01

ಹಾಸನ,ಸೆ.3- ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಹಾಸನ- ಅರಸೀಕೆರೆ ನಗರಸಭೆ, ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಸಕಲೇಶಪುರ ಪುರಸಭೆಗಳು ಜೆಡಿಎಸ್ ಪಾಲಾಗಿವೆ. [ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ LIVE UPDATES ]
# ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ಪುರಸಭೆಯ 23 ಸ್ಥಾನಗಳಲ್ಲಿ ಜೆಡಿಎಸ್ 15 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬೇಕಾಗಿರುವ ಬಹುಮತವನ್ನು ಗಳಿಸಿದೆ. ಕಾಂಗ್ರೆಸ್ ಪಕ್ಷ 8 ಸ್ಥಾನಗಳಲ್ಲಿ ಜಯಗಳಿಸಿದೆ.

# ಹೊಳೆನರಸೀಪುರ: ಹೊಳೆ ನರಸೀಪುರ ಪುರಸಭೆಯ ಎಲ್ಲಾ 23 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಜೆಡಿಎಸ್ ಹೊಸ ದಾಖಲೆ ನಿರ್ಮಿಸಿದೆ.

# ಸಕಲೇಶಪುರ: ಸಕಲೇಶಪುರ ಪುರಸಭೆಯ 23 ಸ್ಥಾನಗಳಲ್ಲಿ ಜೆಡಿಎಸ್ 14 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಕಾರಕ್ಕೆ ಬರಲಿದೆ. ಬಿಜೆಪಿ 2 , ಕಾಂಗ್ರೆಸ್ 4 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

#ಹಾಸನ: ಹಾಸನ ನಗರಸಭೆಯ 35 ಸ್ಥಾನಗಳ ಪೈಕಿ ಜೆಡಿಎಸ್ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 13, ಕಾಂಗ್ರೆಸ್ 2 ಹಾಗೂ ಪಕ್ಷೇತರರು 03 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇದುವರೆಗೆ 33 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ.

# ಅರಸೀಕೆರೆ: ಅರಸೀಕೆರೆಯ ನಗರಸಭೆಯ 31 ಸ್ಥಾನಗಳ ಜೆಡಿಎಸ್ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತಗಳಿಸಿದೆ. ಬಿಜೆಪಿ 05, ಕಾಂಗ್ರೆಸ್ 01, ಪಕ್ಷೇತರ 03 ಸ್ಥಾನಗಳಲ್ಲಿ ಗೆದ್ದಿದೆ.

Facebook Comments

Sri Raghav

Admin