ಶಿವಮೊಗ್ಗದಲ್ಲಿ ಗೆಲುವಿನ ಕೇಕೆ ಹಾಕಿದ ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

BJP-Rath-Yatra--01

ಶಿವಮೊಗ್ಗ,ಸೆ.3- ಭಾರೀ ಜಿದ್ದಾಜಿದ್ದಿನಿಂದ ಕೂಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ಬಿಜೆಪಿ ಅಧಿಕಾರ ಗದ್ದುಗೆ ಹಿಡಿದಿದೆ. ಒಟ್ಟು 35 ಸ್ಥಾನಗಳಲ್ಲಿ ಬಿಜೆಪಿ 23ರಲ್ಲಿ ಗೆಲುವು ಸಾಧಿಸುವ ಮೂಲಕ ಮೊಟ್ಟ ಮೊದಲ ಬಾರಿಗೆ ಮಹಾನಗರ ಪಾಲಿಕೆಯಲ್ಲಿ ಕಮಲ ಅರಳಿದೆ.  [ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ LIVE UPDATES ]

ಕಾಂಗ್ರೆಸ್ 6, ಜೆಡಿಎಸ್4 ಹಾಗೂ ಪಕ್ಷೇತರರು 2 ಸ್ಥಾನಗಳಲ್ಲಿ ಗೆದ್ದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶಾಸಕ ಕೆ.ಎಸ್.ಈಶ್ವರಪ್ಪ ಪ್ರಭಾವದಿಂದ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆದ್ದಿದ್ದ ಈಶ್ವರಪ್ಪನವರಿಗೆ ಮಹಾನಗರ ಪಾಲಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಹೀಗಾಗಿ ಕಳೆದ ಹಲವು ದಿನಗಳಿಂದ ಅವರು ಕ್ಷೇತ್ರ ಬಿಟ್ಟು ಕದಲಿರಲಿಲ್ಲ.

ಶತಾಯಗತಾಯ ಪಾಲಿಕೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಜಿದ್ದಿಗೆ ಬಿದ್ದಿದ್ದ ಯಡಿಯೂರಪ್ಪ ಮತ್ತು ಈಶ್ವರಪ್ಪ ಒಟ್ಟಾಗಿ ಪ್ರಚಾರ ನಡೆಸಿದ್ದರಿಂದ ಪಕ್ಷ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಶಸ್ವಿಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಈ ಚುನಾವಣೆಯಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿವೆ. ಕಳೆದ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು.

Facebook Comments

Sri Raghav

Admin