ಪ್ರತಿ ಜಿಲ್ಲೆಯಲ್ಲೂ ಮುಖ್ಯಮಂತ್ರಿ ಜನತಾ ದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು, ಸೆ.4- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಜನರ ಬಳಿಗೆ ಹೋಗಿ ಜನತಾದರ್ಶನ ಮಾಡಲು ಉದ್ದೇಶಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಇನ್ನು ಮುಂದೆ ಜನರ ಮುಂದೆ ಹೋಗಿ ಸಮಸ್ಯೆ ಆಲಿಸಲು ಉದ್ದೇಶಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ಮಾಡಲು ಮುಖ್ಯಮಂತ್ರಿ ಚಿಂತನೆ ನಡೆಸಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಮನವಿಗಳನ್ನು ಸಲ್ಲಿಸಲು ಬೆಂಗಳೂರಿಗೆ ಬರಬೇಕಿಲ್ಲ. ಮುಖ್ಯಮಂತ್ರಿಗಳೇ ಆಯಾ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಕುಂದುಕೊರತೆಗಳನ್ನು ಜನತಾ ದರ್ಶನದಲ್ಲಿ ಹೇಳಿಕೊಳ್ಳಬಹುದಾಗಿದೆ. ಆ ಮೂಲಕ ಜನರ ಮನೆ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವ ಪ್ರಯತ್ನ ಮಾಡಲು ಉದ್ದೇಶಿಸಲಾಗಿದೆ.

ಜನತಾ ದರ್ಶನದ ಸಂದರ್ಭದಲ್ಲಿ ಜನರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವಂತಹ ವಿನೂತನ ಕಾರ್ಯಕ್ರಮ ಜಾರಿಗೊಳಿಸಲು ಮುಖ್ಯಮಂತ್ರಿ ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಜನತಾದರ್ಶನ ಮಾಡಲಿದ್ದಾರೆ. ನಾಡಿನ ಜನರ ಸಲಹೆಗಳಿಗೆ ತಕ್ಕಂತೆ ಆಡಳಿತ ನಡೆಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

Sri Raghav

Admin