ಶಾಲೆಯ ಕಾಂಪೌಂಡ್ ಕುಸಿದು ಬಿದ್ದು ಆಟವಾಡುತ್ತಿದ್ದ ವಿದ್ಯಾರ್ಥಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

School

ಚಿಕ್ಕಬಳ್ಳಾಪುರ, ಸೆ.4- ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮುದ್ದೇನಹಳ್ಳಿ ಬಳಿಯ ದಿಣ್ಣೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಎರಡನೆ ತರಗತಿ ವಿದ್ಯಾರ್ಥಿ ಅರುಣ್ ಮೃತಪಟ್ಟ ದುರ್ದೈವಿ.

ಶಾಲಾ ಸಮಯದಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಶಾಲೆಗೆ ಇತ್ತೀಚೆಗಷ್ಟೇ ನೂತನವಾಗಿ ಕಾಂಪೌಂಡ್ ಹಾಗೂ ಗೇಟ್ ನಿರ್ಮಿಸಲಾಗಿತ್ತು. ಕಾಂಪೌಂಡ್ ಬಳಿ ಎಂದಿನಂತೆ ಮಕ್ಕಳು ಆಟವಾಡುತ್ತಿದ್ದರು. ನಿನ್ನೆ ಇದ್ದಕ್ಕಿದ್ದಂತೆ ಕಾಂಪೌಂಡ್ ಗೋಡೆ ಅರುಣ್ ಮೇಲೆ ಕುಸಿದು ಬಿದ್ದಿದೆ. ಕೂಡಲೇ ಶಾಲಾ ಸಿಬ್ಬಂದಿಗಳು ಸ್ಥಳೀಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ.

ಆಕ್ರೋಶ:
ಕಾಮಗಾರಿ ಕಳಪೆಯಿಂದ ಕೂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲ್ಲೂಕಿನಲ್ಲಿ ಇಂದು ಘಟನೆಗಳು ಮರು ಕಳಿಸುತ್ತಲೇ ಇವೆ. ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸಲಾದ ಕಾಂಪೌಂಡ್ ಮತ್ತು ಗೇಟ್‍ಗಳು ಬಹುತೇಕ ಕಳಪೆಯಿಂದ ಕೂಡಿವೆ. ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments

Sri Raghav

Admin