ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು, ಅಪಾರ ಪ್ರಮಾಣದ ಬೆಳೆ ನಾಶ

ಈ ಸುದ್ದಿಯನ್ನು ಶೇರ್ ಮಾಡಿ

Elephant--01

ಹಾಸನ, ಸೆ.5- ಜಿಲ್ಲೆಯ ಸಕಲೇಶಪುರ ಆಲೂರು ಭಾಗದಲ್ಲಿ ಕಾಡಾನೆಗಳ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು , ರೈತರ ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿವೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಆನೆಗಳ ಹಿಂಡನ್ನು ಕಂಡು ಈ ಭಾಗದ ರೈತರು ಆತಂಕಕ್ಕೀಡಾಗಿದ್ದಾರೆ. ಹಾಗೂ ಬೆಳೆಗಳನ್ನು ಬೆಳೆಯುವುದಕ್ಕೂ ಸಹ ಹಿಂದೇಟು ಹಾಕುತ್ತಿದ್ದಾರೆ.

ಸಕಲೇಶಪುರ ತಾಲ್ಲೂಕಿನ ಹೆಗ್ಗೋವೆ ಗ್ರಾಮದ ಮಂಜುನಾಥ್, ನಾಗರಾಜ್, ದಾಕ್ಷಾಯಿಣಿ , ಸುಳ್ಳಕ್ಕಿ ಗ್ರಾಮದ ಬೈರಯ್ಯ, ಕಾಳಯ್ಯ ಅವರ ಕಾಫಿ ತೋಟಗಳಲ್ಲಿ ಸಂಚರಿಸುತ್ತಿರುವ ಸುಮಾರು 30 ಕಾಡಾನೆಗಳ ಹಿಂಡು ಬೆಳೆಗಳನ್ನು ನಾಶ ಮಾಡುತ್ತಿವೆ. ಕಾಫಿ ತೋಟಕ್ಕೆ ನುಗ್ಗುತ್ತಿರುವ ಕಾಡಾನೆಗಳು ಲಕ್ಷಾಂತರ ರೂ. ಮೌಲ್ಯದ ಮೆಣಸು, ಭತ್ತ, ಬಾಳೆ, ತೆಂಗಿನ ಮರಗಳನ್ನು ನಾಶ ಮಾಡಿದೆ.

ಬೆಳಗಿನ ಸಮಯದಲ್ಲೇ ಕಾಡಾನೆಗಳು ಅಡ್ಡಾಡುತ್ತಿದ್ದು , ಶಾಲಾ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ರೈತರು ಪ್ರಾಣಾಪಾಯದಿಂದ ಓಡಾಡಬೇಕಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು, ಸ್ಥಳಕ್ಕೆ ಧಾವಿಸಿ ಸೂಕ್ತ ರಕ್ಷಣೆ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಆನೆ ಕಾರಿಡಾರ್ ಯೋಜನೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಮತ್ತು ಆನೆಗಳನ್ನು ಸ್ಥಳಾಂತರಿಸಲು ಅರಣ್ಯ ಇಲಾಖೆಗೆ ಅನುಮತಿ ಇಲ್ಲದೆ ಆನೆಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಓಡಿಸುವುದಷ್ಟೇ ದಾರಿಯಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin