12 ವರ್ಷದ ಹಿಂದೆ ಕುಮಾರಸ್ವಾಮಿ ನೀಡಿದ್ದ ಭರವಸೆ ಈಡೇರಿಕೆಗೆ ಮೂಹೂರ್ತ..!

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಚಿಕ್ಕಮಗಳೂರು, ಸೆ.5- ಹನ್ನೆರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದ ದಿನಗಳಲ್ಲಿ ಚಿಕ್ಕಮಗಳೂರು ತಾಲೂಕಿನ ಬೆಳವಾಡಿಯಲ್ಲಿ ರಂಗಪ್ಪ-ತಿಮ್ಮಮ್ಮ ದಂಪತಿಗಳ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಭರವಸೆ ಈಡೇರುವ ದಿನಗಳು ಹತ್ತಿರವಾಗುತ್ತಿವೆ.

ಅಂದು ಮುಖ್ಯಮಂತ್ರಿ ಕುಮಾರಸ್ವಾಮಿ ಈ ದಂಪತಿಗಳಿಗೆ ನೆರವಿನ ಭರವಸೆ ನೀಡಿದ್ದರು. ಬದಲಾದ ರಾಜಕೀಯ ವಿದ್ಯಮಾನ ಇನ್ನಿತರೆ ಕಾರಣಗಳಿಂದ ಅವರು ನೀಡಿದ್ದ ಆಶ್ವಾಸನೆ ಈಡೇರಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ನಿನ್ನೆ ಈ ಕುಟುಂಬದವರನ್ನು ಕರೆಸಿ ಪ್ರೆಸ್‍ಕ್ಲಬ್ ಅಧ್ಯಕ್ಷ ದಿನೇಶ್ ಪಟವರ್ಧನ್ ಸಮ್ಮುಖದಲ್ಲಿ ಮಾತುಕತೆ ನಡೆಸಿ ವೈಯಕ್ತಿಕ ನೆರವು ನೀಡಿದ್ದಾರೆ.

ಇದಲ್ಲದೆ, ಈ ಹಿಂದೆ ನೀಡಿದ್ದ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳ 15ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆಗೆ ದಿನಾಂಕ ನಿಗದಿ ಪಡಿಸಿ ಕುಟುಂಬವನ್ನು ಆಹ್ವಾನಿಸಲಾಗಿದೆ.

Facebook Comments

Sri Raghav

Admin