ಟ್ರೋಲ್-ಡಿಸೇಲ್ ಬೆಲೆ ಏರಿಕೆ ಪ್ರಧಾನಿಯವರ ‘ಅಚ್ಛೇ ದಿನ್’ : ಜಮೀರ್ ವ್ಯಂಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

Zameer
ಹುಬ್ಬಳ್ಳಿ, ಸೆ.5- ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಗಗನಕ್ಕೇರುತ್ತಿದ್ದು, ಇದೇ ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಛೇದಿನ್ ಎಂದು ಅಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಇದರ ವಿರುದ್ಧ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಮಾತೆತ್ತಿದ್ದರೆ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹೇಳುತ್ತಾ ತಿರುಗಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಸ್ಥಿರವಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ಐದು ವರ್ಷ ಆಡಳಿತ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು. ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿ ಘೋಷಣೆಯಾದ ಎಲ್ಲಾ ಯೋಜನೆಗಳೂ ಈ ಸರ್ಕಾರದಲ್ಲಿ ಮುಂದುವರಿಯುತ್ತವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Facebook Comments

Sri Raghav

Admin