ಆಧಾರ್ ಇಲ್ಲವೆಂದು ಶಾಲೆ ಪ್ರವೇಶ ನಿರಾಕರಿಸುವಂತಿಲ್ಲ : ಯುಐಡಿಎಐ

ಈ ಸುದ್ದಿಯನ್ನು ಶೇರ್ ಮಾಡಿ

ASdhaar--01

ನವದೆಹಲಿ, ಸೆ.5 (ಪಿಟಿಐ)- ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಭಾರತ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ದೇಶದ ಶಾಲೆಗಳಿಗೆ ಸ್ಪಷ್ಟ ಸೂಚನೆ ನೀಡಿದೆ.  ಶಾಲಾ ಪ್ರವೇಶ ಸಂದರ್ಭದಲ್ಲಿ ಆಧಾರ್ ಕಾರ್ಡ್ ಕೊರತೆಯಿಂದ ಕಿರಿಕಿರಿ ಅನುಭವಿಸುವ ವಿದ್ಯಾರ್ಥಿಗಳು ಮತ್ತು ಪೊಷಕರು ನಿರಾಳವಾಗಿದ್ದಾರೆ. ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಪ್ರವೇಶ ನಿರಾಕರಿಸಬಾರದು. ಇದೇ ಆಧಾರದ ಮೇಲೆ ಪ್ರವೇಶಾತಿ ನಿರಾಕರಿಸಿದರೆ ಅದನ್ನು ಅಸಿಂಧು ಎಂದು ಪರಿಗಣಿಸಲಾಗುವುದು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಸ್ಥಳೀಯ ಬ್ಯಾಂಕುಗಳು, ಅಂಚೆ ಕಚೇರಿಗಳು, ರಾಜ್ಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರ ಮತ್ತು ಸಮನ್ವಯತೆಯೊಂದಿಗೆ ಶಾಲೆಗಳು ಆಧಾರ್ ಕಾರ್ಡ್ ನೋಂದಣಿಗಾಗಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆಯೂ ಯುಐಡಿಎಐ ಸೂಚಿಸಿದೆ.

ಈ ಸಂಬಂಧ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪ್ರಾಧಿಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ಆಧಾರ್ ಇಲ್ಲವೆಂಬ ಕಾರಣಕ್ಕಾಗಿ ಕೆಲವು ಶಾಲೆಗಳು ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಸಂಗತಿ ತನ್ನ ಗಮನಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸುವಂತಿಲ್ಲ. ಹೀಗೆ ನಿರಾಕರಿಸುವುದರಿಂದ ಮಕ್ಕಳ ಶಿಕ್ಷಣ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಎಚ್ಚರಿಸಿದೆ.

Facebook Comments

Sri Raghav

Admin