ಪ್ರವಾಹ ಪೀಡಿತರ ನೆರವಿಗಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತಲಾ 10 ಸಾವಿರ ರೂ. ದೇಣಿಗೆ

ಈ ಸುದ್ದಿಯನ್ನು ಶೇರ್ ಮಾಡಿ

high-court
ಬೆಂಗಳೂರು, ಸೆ.5-ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಕರ್ನಾಟಕ ಮತ್ತು ಕೇರಳ ರಾಜ್ಯದ ಪ್ರವಾಹ ಪೀಡಿತರ ನೆರವಿಗಾಗಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 10 ಸಾವಿರ ರೂ. ಗಳ ಚೆಕ್ ನೀಡಿದ್ದಾರೆ. ಇದಲ್ಲದೆ ಎಲ್ಲ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ತಮ್ಮ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದು, ಈ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಹಕಾರ ಸಂಘವು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ನೀಡಲು ನಿರ್ಧರಿಸಿದೆ.

Facebook Comments