ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ, ಜೆಡಿಎಸ್’ಗೆ ಮೇಯರ್ ಪಟ್ಟ

ಈ ಸುದ್ದಿಯನ್ನು ಶೇರ್ ಮಾಡಿ

Sa-Ra-Mahesh--01

ಮೈಸೂರು, ಸೆ.5- ಈ ಬಾರಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಮೇಯರ್ ಸ್ಥಾನವನ್ನು ಹಿಡಿಯಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಫಲಿತಾಂಶದಲ್ಲಿ ಅತಂತ್ರ ಸ್ಥಿತಿ ಉಂಟಾಗಿದ್ದರೂ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಈ ಬಾರಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

ಜೆಡಿಎಸ್‍ನವರು ಹೆಚ್ಚಿನ ಸಂಖ್ಯೆಯಲ್ಲಿ ಜಯ ಗಳಿಸಿರುವುದರಿಂದ ನಮ್ಮ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗಲಿದ್ದಾರೆ ಎಂದು ಅವರು ತಿಳಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸೇರಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿದ್ದೆವು. ಅದೇ ರೀತಿ ಈಗ ಮೈಸೂರಿನಲ್ಲೂ ಅತಂತ್ರ ಫಲಿತಾಂಶ ಬಂದಿರುವುದರಿಂದ ಇದೇ ಮೈತ್ರಿ ಧರ್ಮ ಮುಂದುವರಿಯಲಿದೆ ಎಂದು ಹೇಳಿದರು.

ನಾವು 19 ಸ್ಥಾನಗಳನ್ನು ಪಡೆದಿದ್ದೇವೆ. ಕಾಂಗ್ರೆಸ್ 18ಸ್ಥಾನಗಳನ್ನು ಪಡೆದಿದೆ. ಹೀಗಾಗಿ ಜೆಡಿಎಸ್‍ಗೆ ಮೇಯರ್ ಸ್ಥಾನ ಸಿಗುವುದು ನ್ಯಾಯಸಮ್ಮತ ಎಂದು ಹೇಳಿದರು. ಕಾಂಗ್ರೆಸ್-ಜೆಡಿಎಸ್ ಈಗ ಮೈತ್ರಿ ಮಾಡಿಕೊಳ್ಳುವುದು ಪಕ್ಕಾ ಆಗಿರುವುದರಿಂದ ಬಿಜೆಪಿ 22 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ವಿಪಕ್ಷ ಸ್ಥಾನದಲ್ಲಿ ಕೂರಬೇಕಾಗಿದೆ.

Facebook Comments

Sri Raghav

Admin