ಪರಿಶಿಷ್ಟ ನೌಕರರ ಬಡ್ತಿ ಮೀಸಲಾತಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

supreme-ocurt

ನವದೆಹಲಿ, ಸೆ.5 (ಪಿಟಿಐ)- ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆ.12ಕ್ಕೆ ಮುಂದೂಡಿದೆ. ಈ ಕುರಿತು ಉಂಟಾಗಿರುವ ಗೊಂದಲ ಮತ್ತು ವಿವಾದಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಉದಯ್‍ಲಲಿತ್ ನೇತೃತ್ವದ ಪೀಠ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಬುಧವಾರಕ್ಕೆ ಮುಂದೂಡಿದೆ.

Facebook Comments

Sri Raghav

Admin