ದೆಹಲಿಗೆ ನುಗ್ಗಿದ ಕೃಷಿಕರು, ಕಾರ್ಮಿಕರ ಮಹಾ ಪ್ರವಾಹ, ಟ್ರಾಫಿಕ್ ಜಾಮ್

ಈ ಸುದ್ದಿಯನ್ನು ಶೇರ್ ಮಾಡಿ

Delhi-Rally
ನವದೆಹಲಿ, ಸೆ.5-ರಾಜಧಾನಿ ದೆಹಲಿ ಇಂದು ಅಕ್ಷರಶಃ ರೈತರು ಮತ್ತು ಕಾರ್ಮಿಕರ ಮಹಾ ಪ್ರವಾಹಕ್ಕೆ ಸಾಕ್ಷಿಯಾಯಿತು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸಾವಿರಾರು ಮಂದಿ ಇಂದು ರಾಮ್‍ಲೀಲಾ ಮೈದಾನದಿಂದ ಸಂಸತ್‍ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಯುಕ್ತ ಭಾರಿ ಸಂಚಾರ ಒತ್ತಡ ಉಂಟಾಗಿ ಸಾರ್ವಜನಿಕರು ಕಿರಿಕಿರಿ ಅನುಭವಿಸಿದರು.

ಸೂಕ್ತ ವೇತನ, ಬೆಳೆಗೆ ಬೆಂಬಲ ಬೆಲೆ ಮತ್ತು ಸಾಲಮನ್ನಾ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ರಾಜ್ಯಗಳ ಸಹಸ್ರಾರು ಕಾರ್ಮಿಕರು, ಕೃಷಿಕರು ಮತ್ತು ಕೂಲಿ ಕಾರ್ಮಿಕರು ಎಡ ಪಂಥೀಯ ಸಂಘಟನೆಗಳು ಆಯೋಜಿಸಿದ್ದ ಮೆಗಾ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಮುಂಜಾನೆಯಿಂದಲೇ ದೇಶದ ವಿವಿಧ ಭಾಗಗಳಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ಜಮಾಯಿಸಿ ನಂತರ ಪಾರ್ಲಿಮೆಂಟ್ ಚಲೋ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿದ ಪರಿಣಾಮ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಉದ್ದನೆ ಸಾಲಿನಲ್ಲಿ ನಿಂತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಇದರಿಂದಾಗಿ ವಾಹನಗಳ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾದರು. ಭಾರೀ ಸಂಚಾರ ಒತ್ತಡ ನಿಭಾಯಿಸಲು ಪೆÇಲೀಸರು ಹರಸಾಹಸ ಮಾಡಬೇಕಾಯಿತು.

ಪ್ರತಿಭಟನಾ ರ್ಯಾಲಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಧಾನಿ ದೆಹಲಿಯಾದ್ಯಂತ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಮುಂದೆ ಒಟ್ಟು 15 ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು, ಉದ್ಯೋಗ ಸೃಷ್ಟಿಸಬೇಕು. ಕಾರ್ಮಿಕರಿಗೆ ಕನಿಷ್ಠ 18,000 ರೂ.ಗಳ ವೇತನ ನಿಗದಿಗೊಳಿಸಬೇಕು. ಕಾರ್ಮಿಕ ಕಾನೂನುಗಳಿಗೆ ಸೂಕ್ತ ತಿದ್ದುಪಡಿಗಳನ್ನು ಮಾಡಬೇಕು. ಸಾಲ ಮನ್ನಾ ಮಾಡಬೇಕು, ಭೂಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ತರಬೇಕು, ಬಲವಂತದ ಭೂಸ್ವಾಧೀನಕ್ಕೆ ಕಡಿವಾಣ ಹಾಕಬೇಕು, ಉದಾರನೀತಿಯನ್ನು ಪರಿಷ್ಕರಿಸಬೇಕು. ಗುತ್ತಿಗೆ ಕಾರ್ಮಿಕ ಪದ್ದತಿ ರದ್ದುಗೊಳಿಸಬೇಕು-ಈ ಮೊದಲಾದ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಲಾಗಿದೆ.

Rally--01

ಮಜ್ದೂರ್ ಕಿಸಾನ್ ಸಂಘರ್ಷ ರ್ಯಾಲಿಯು ಎಡಪಂಥೀಯ ಸಂಘಟನೆಗಳಾದ ಅಖಿಲ ಭಾರತ ಕೃಷಿ ಕಾರ್ಮಿಕರ ಒಕ್ಕೂಟ(ಎಐಎಡಬ್ಲ್ಯುಯು), ಭಾರತೀಯ ಕಾರ್ಮಿಕ ಒಕ್ಕೂಟಗಳ ಕೇಂದ್ರ(ಸಿಐಟಿಯು) ಹಾಗೂ ಅಖಿಲ ಭಾರತ ಕಿಸಾನ್ ಸಭಾ(ಎಐಕೆಎಸ್) ಸಂಯುಕ್ತಾಶ್ರಯದಲ್ಲಿ ನಡೆದ ಪ್ರಥಮ ಸಂಯೋಜಿತ ಬೃಹತ್ ಪ್ರತಿಭಟನಾ ಕಾರ್ಯಕ್ರಮವಾಗಿದೆ.

ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಮುಖಂಡರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳು ರೈತರು, ಕೂಲಿ ಕಾರ್ಮಿಕರು ಮತ್ತು ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು. ತಮ್ಮ ಬೇಡಿಕೆಗಳು ಈಡೇರದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

.

Facebook Comments

Sri Raghav

Admin