ಬೆಂ.ಗ್ರಾ ನ್ಯಾಯಾಲಯಗಳಿಗೆ ಶೀಘ್ರಲಿಪಿಗಾರರ ಹುದ್ದೆಗಳು ಭರ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Bengaluru-Rural-Court
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 20
ಹುದ್ದೆಗಳ ವಿವರ
ಶೀಘ್ರಲಿಪಿಗಾರರ ಹುದ್ದೆಗಳು
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಅಥವಾ ಇದಕ್ಕೆ ಸಮನಾದ ಶಿಕ್ಷಣ ಪಡೆದಿರಬೇಕು. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದ್ದು, ಗರಿಷ್ಠ ವಯಸನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರ ಹಿಂದುಳಿದ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ – 1 ರ ವರ್ಗಕ್ಕೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿಸೈನಿಕರಿಗೆ, ಅಂಗವಿಕಲರಿಗೆ ನಿಯಮಾನುಸಾರ ಸಡಿಲಿಕೆ ಮಾಡಲಾಗಿದೆ.
ಶುಲ್ಕ : ಸಾಮಾನ್ಯ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 200 ರೂ, ಪ.ಜಾ, ಪ.ಪಂ, ಪ್ರವರ್ಗ – 1 ಮತ್ತು ಅಂಗವಿಕಲರಿಗೆ 100 ರೂ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 25-09-2018

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ   www.districts.ecourts.gov.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments