ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್.ಪಿ.ವೈದ್ ಎತ್ತಂಗಡಿ

ಈ ಸುದ್ದಿಯನ್ನು ಶೇರ್ ಮಾಡಿ

Kashmir--01

ಶ್ರೀನಗರ, ಸೆ.7-ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ಎಸ್.ಪಿ.ವೈದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವೈದ್ ಕಾರ್ಯನಿರ್ವಹಿಸುತ್ತಿದ್ದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಹುದ್ದೆಗೆ ದಿಲ್‍ಬಾಗ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.  ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರು ಮೂವರು ಪೊಲೀಸರು ಹಾಗೂ ಯೋಧರು ಮತ್ತು ಪೊಲೀಸರ ಸಂಬಂಧಿಕರನ್ನು ಅಪಹರಿಸಿದ್ದರು. ಈ ಪ್ರಕರಣದಿಂದ ವೈದ್ ಅವರನ್ನು ಪೊಲೀಸ್ ಮುಖ್ಯಸ್ಥ ಸ್ಥಾನದಿಂದ ವರ್ಗಾವಣೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರ ಕಾರಾಗೃಹದ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದಿಲ್‍ಬಾಗ್ ಸಿಂಗ್ ಅವರು ರಾಜ್ಯದ ಪೊಲೀಸ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Facebook Comments

Sri Raghav

Admin