ಗಾಂಜಾ ಮಾರುತ್ತಿದ್ದವ ಅರೆಸ್ಟ್, 80 ಸಾವಿರ ಮೌಲ್ಯದ 2 ಕೆಜಿ ಗಾಂಜಾ ವಶ

ಈ ಸುದ್ದಿಯನ್ನು ಶೇರ್ ಮಾಡಿ

Ganja-Seller
ಬೆಂಗಳೂರು,ಸೆ.7-ಗಾಂಜಾ  ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 80 ಸಾವಿರ ಮೌಲ್ಯದ 2 ಕೆಜಿ ಗಾಂಜಾ, 2 ಮೊಬೈಲ್ ವಶಪಡಿಸಿಕೊಂಡಿದ್ದಾರೆ.  ಚಿಕ್ಕಬಳ್ಳಾಪುರ ಮೂಲದ ಮೌಲ(35) ಬಂಧಿತ ಆರೋಪಿಯಾಗಿದ್ದು, ಮತ್ತೊಬ್ಬ ಆರೋಪಿ ಷರೀಫ್ ತಲೆ ಮರೆಸಿಕೊಂಡಿ ದ್ದಾನೆ.  ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯಪುರ ಸರ್ಕಲ್ ಬಸ್ ನಿಲ್ದಾಣದ ಸಮೀಪ ಜೈನ್ ಟೆಂಪಲ್ ಮುಂಭಾಗದ ಫುಟ್‍ಪಾತ್ ಬಳಿ ಗಾಂಜಾವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದಾನೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ತಕ್ಷಣ ಸ್ಥಳದ ಮೇಲೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ವ್ಯವಸ್ಥಿತ ರೀತಿಯಲ್ಲಿ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು ಅದನ್ನು ವಶದಲ್ಲಿಟ್ಟುಕೊಂಡು ಪರಿಚಿತ ಗಿರಾಕಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಅಂಶ ವಿಚಾರಣೆಯಿಂದ ತಿಳಿದುಬಂದಿದೆ.  ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Facebook Comments

Sri Raghav

Admin