ಸಾವಿನ ರಹದಾರಿಯಾದ ರಾಷ್ಟ್ರೀಯ ಹೆದ್ದಾರಿ, ಪ್ರಾಧಿಕಾರದ ಅಧಿಕಾರಿಗಳೇ ಯಮಧೂತರು..!

ಈ ಸುದ್ದಿಯನ್ನು ಶೇರ್ ಮಾಡಿ

Election--01

ತುಮಕೂರು,ಸೆ.7- ದಿನೇ ದಿನೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದಕ್ಕೆ ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಸುಮಾರು ವರ್ಷಗಳಿಂದ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 4 ರಸ್ತೆ ಇದ್ದಾಗ ಪದೇ ಪದೇ ಸರಣಿ ಅಪಘಾತಗಳು ಸಂಭವಿಸುತ್ತಿದ್ದವು. ಬೆಂಗಳೂರಿನಿಂದ ತುಮಕೂರು ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರ ರಸ್ತೆಯನ್ನು 48ಕ್ಕೆ ಏರಿಸಲಾಗಿದೆ.

ತುಮಕೂರಿನಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರಸ್ತೆ ಇತ್ತೀಚಿನ ದಿನಗಳಲ್ಲಿ ಯಮ ರೂಪದ ರಸ್ತೆಯಾಗಿ ಮಾರ್ಪಟ್ಟಿದೆ. ಇದಕ್ಕೆ ಮೂಲ ಕಾರಣ ಎಲ್ಲೆಂದರಲ್ಲಿ ರಸ್ತೆ ಬದಿಯಲ್ಲಿ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸುವುದು ಮತ್ತು ವಾಹನಗಳ ಹಿಂದೆಮುಂದೆ ಇಂಡಿಕೇಟರ್ ಹಾಕದೆ ಇರುವುದು, ಇದರ ಬಗ್ಗೆ ಅರಿವಿಲ್ಲದೆ ಅತಿವೇಗವಾಗಿ ಬರುವ ವಾಹನಗಳು ನಿಂತಿರುವ ವಾಹನಗಳಿಗೆ ಡಿಕ್ಕಿ ಹೊಡೆದು ಅಪಾರ ಪ್ರಮಾಣದಲ್ಲಿ ಸಾವುನೋವಿನ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಇದರಿಂದ ನೂರಾರು ಕುಟುಂಬಗಳು ಬೀದಿಪಾಲಾಗಿವೆ.

ಇಂತಹ ಘಟನೆಗಳು ದಿನ ನಿತ್ಯ ನಡೆಯುತ್ತಲೇ ಇವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳು ಎಚ್ಚರಿಕೆ ವಹಿಸಬೇಕಿದೆ ಎಂದು ಆಗ್ರಹಿಸಿದರು. ಬೆಂಗಳೂರಿನಿಂದ ತುಮಕೂರು ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮೂಲಕ ಪುಣೆ ಮತ್ತು ಮಹಾರಾಷ್ಟ್ರ ತಲುಪುವ ಈ ರಸ್ತೆಯಲ್ಲಿ ಪ್ರತಿದಿನ 10ಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಲೇ ಇವೆ. ಅದರಲ್ಲಿ ಬಹುತೇಕ ಪ್ರಕರಣಗಳು ನಿಂತ ವಾಹನಕ್ಕೆ ಡಿಕ್ಕಿ ಹೊಡೆದ ಅಪಘಾತವೇ ಹೆಚ್ಚಾಗಿದೆ.

ಇಂತಹ ಸಂದರ್ಭದಲ್ಲಿ 30 ಕೆ.ಮಿಗೆ ಹೈವೇ ಪೆಟ್ರೋಲ್ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಪೊಲೀಸರು ಅಂತಹ ರಸ್ತೆ ಮಾರ್ಗದಲ್ಲಿ ವಾಹನಗಳು ಕೆಟ್ಟು ನಿಂತಿದ ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಬೇಕು. ಆದರೆ ಯಾವುದೆ ಕ್ರಮ ಕೈಗೊಳ್ಳದೇ ಇರುವುದರಿಂದ ಅಪಘಾತಗಳು ಹೆಚ್ಚಾಗಿದ್ದು, ಸಾವಿನ ಸಂಖ್ಯೆ ಎಲ್ಲೆ ಮೀರುತ್ತಿದೆ. ತಕ್ಷಣವೇ ರಾ.ಹೆ.ಪ್ರಾಧಿಕಾರದವರು, ಪೊಲೀಸರು ಈ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Facebook Comments

Sri Raghav

Admin