ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ, ಹತ್ಯೆ ತಡೆಗಟ್ಟದ 18 ರಾಜ್ಯಗಳ ವಿರುದ್ಧ ಸುಪ್ರೀಂ ಗರಂ

ಈ ಸುದ್ದಿಯನ್ನು ಶೇರ್ ಮಾಡಿ

Supreme_Court_of_India_-_Retouched

ನವದೆಹಲಿ, ಸೆ.7-ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ ಹಾಗೂ ದೊಂಬಿ ಹತ್ಯೆ ತಡೆಗಟ್ಟುವ ಕುರಿತು ಕ್ರಮಗೊಳ್ಳಲು ತಾನು ನೀಡಿದ್ದ ಆದೇಶವನ್ನು ಪಾಲಿಸದ 18 ರಾಜ್ಯಗಳ ಬಗ್ಗೆ ಸುಪ್ರೀಂಕೋರ್ಟ್ ಇಂದು ಗರಂ ಆಗಿದೆ. ಈ ಸಂಬಂಧ ಒಂದು ವಾರದೊಳಗೆ ವರದಿ ಸಲ್ಲಿಸಲು ಈ ರಾಜ್ಯಗಳಿಗೆ ಕಟ್ಟ ಕಡೆ ಅವಕಾಶ ನೀಡಿದೆ.  29 ರಾಜ್ಯಗಳಲ್ಲಿ 11 ರಾಜ್ಯಗಳು ಹಾಗೂ ಏಳು ಕೇಂದ್ರಾಡಳಿತ ಪ್ರದೇಶಗಳು (ಯುಟಿಗಳು) ಮಾತ್ರ ತನ್ನ ಆದೇಶವನ್ನು ಪಾಲಿಸುವ ಬಗ್ಗೆ ವರದಿಗಳನ್ನು ಸಲ್ಲಿಸಿವೆ. ಆದರೆ ಉಳಿದ ರಾಜ್ಯಗಳು ಮತ್ತು ಯುಟಿಗಳು ಈ ಸಂಬಂಧ ಕ್ರಮ ಕೈಗೊಳ್ಳದಿರುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ ಹಾಗೂ ಉದ್ರಿಕ್ತ ಗುಂಪಿನಿಂದ ನಡೆಯುವ ಹಿಂಸಾಚಾರ ಮತ್ತು ಹತ್ಯೆಗಳನ್ನು ತಡೆಗಟ್ಟುವ ಕುರಿತು ಕ್ರಮಗೊಳ್ಳಲು ಸುಪ್ರೀಂಕೋರ್ಟ್ ಈಗಾಗಲೇ ಸೂಚನೆಗಳನ್ನು ನೀಡಿದೆ. ಇದನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ಸಂಬಂಧ ವರದಿಗಳನ್ನು ನೀಡಬೇಕು. ಇದನ್ನು ಸಲ್ಲಿಸದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೊನೆ ಅವಕಾಶ ನೀಡುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ತಿಳಿಸಿದೆ.

ಈ ವರದಿಗಳನ್ನು ಒಂದು ವಾರದೊಳಗೆ ವರದಿ ಸಲ್ಲಿಸಲು ವಿಫಲವಾದರೆ, ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಪೀಠ ತಿಳಿಸಿದೆ.

Facebook Comments

Sri Raghav

Admin