ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದೂ ಸತ್ತಂತಿದೆ : ಡಿವಿಎಸ್

ಈ ಸುದ್ದಿಯನ್ನು ಶೇರ್ ಮಾಡಿ

DV-Sadananda-Gowda-Weter

ಕೆ.ಆರ್.ಪುರ, ಸೆ.7- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದೂ ಸತ್ತಂತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದರು. ಕ್ಷೇತ್ರದ ವಿಜಿನಾಪುರ ವಾರ್ಡ್ ನಾಗಪ್ಪರೆಡ್ಡಿ ಬಡಾವಣೆಯಲ್ಲಿ ನಿರ್ಮಿಸಿದ್ದ ನೂತನ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳಲು ವಿಫಲವಾಗಿದ್ದು. ಅಧಿಕಾರದ ದುರಾಸೆಯಿಂದ ಕಚ್ಚಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಸ್ಥಾನ ಹಾಗೂ ಮುಖ್ಯ ಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿರುವ ಎರಡು ಪಕ್ಷಗಳ ಜನಪ್ರತಿನಿಧಿಗಳು ಅಂಧಾ ದರ್ಬಾರ್ ಮಾಡುತ್ತಿದ್ದಾರೆ ಎಂದು ದೂರಿದರು.
ಕೊಡುಗು ಜನತೆ ನೆಲೆ ಇಲ್ಲದೆ ಕಂಗೆಟ್ಟಿದ್ದಾರೆ. ಇಂತಹ ಸಂದರ್ಭದಲ್ಲೂ ಸಹ ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು. ಪಾಲಿಕೆ ಸದಸ್ಯ ಎಸ್. ರಾಜು, ವಿಶಾಲ್ ಆರ್’ಓ ಟೆಕ್ನಾಲಜಿಸ್‍ನ ಮಾಲೀಕ ವೀರಾಂಜನೇಯ, ಮುಖಂಡರಾದ ಚಿದಾನಂದಮೂರ್ತಿ, ಪಿ.ಡಿ ಚಂದ್ರು, ರಾಜಕುಮಾರ್ ಮತ್ತಿತರರಿದ್ದರು.

Facebook Comments