ದಾವಣಗೆರೆ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಯುವಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accidentದಾವಣಗೆರೆ, ಸೆ.8- ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಜಿಲ್ಲೆಯ ಹರಿಹರ ತಾಲ್ಲೂಕು ಹನಗವಾಡಿ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಮೃತರನ್ನು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಡಿಟಿಡಿಸಿ ಕೊರಿಯರ್ ಕಂಪೆನಿಯಲ್ಲಿ ಕೆಲಸ ಮಾಡುವ ವಿನಯ್ (27) , ಅಜಯ್ (32) , ವಿನಯ್‍ಕುಮಾರ್ (30) ಹಾಗೂ ಸಿದ್ದಪ್ಪ (28) ಎಂದು ತಿಳಿದು ಬಂದಿದೆ.

ಮತ್ತಿಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಸ್ನೇಹಿತರೆಂದು ತಿಳಿದು ಬಂದಿದ್ದು , ಹೊಂಡಾಯ್ ಕ್ರೇಟಾ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಪ್ರವಾಸ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ -4ರಲ್ಲಿ ಇಂದು ಮುಂಜಾನೆ ಈ ದುರ್ಘಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಧಾವಿಸಿದ ಹರಿಹರ ಗ್ರಾಮೀಣ ಠಾಣೆ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin