ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‍ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ksrtc
ಬೆಂಗಳೂರು,ಸೆ.8- ಗೌರಿ-ಗಣೇಶ ಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿದಂತೆ ವಿವಿಧ ನಿಲ್ದಾಣಗಳಿಂದ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿದೆ.  ರಾಜ್ಯದ ಹಾಗೂ ಬೇರೆ ರಾಜ್ಯಗಳ ಹಲವು ಸ್ಥಳಗಳಿಂದ ಬೆಂಗಳೂರಿಗೆ ಸೆ.16ರಂದು ವಿಶೇಷ ಬಸ್‍ಗಳು ಕಾರ್ಯಾಚರಣೆ ನಡೆಸಲಿವೆ.

ಮೆಜೆಸ್ಟಿಕ್, ಬಸವೇಶ್ವರ ಬಸ್ ನಿಲ್ದಾಣ, ಮೈಸೂರ ರಸ್ತೆ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿನಗರ ಬಸ್ ನಿಲ್ದಾನದ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರ ಮುಂಭಾಗದಿಂದ ವಿಶೇಷ ಬಸ್‍ಗಳು ಚೆನ್ನೈ, ಕೊಯಮತ್ತೂರು, ತಿರುಚಿ,ಮದುರೆ, ಕುಂಭಕೋಣ, ತಿರುಪತಿ ವಿಜಯವಾಡ,ಹೈದರಾಬಾದ್‍ಗೆ ತೆರಳಲಿದೆ.

ಮುಂಗಡವಾಗಿ ನಾಲ್ಕಕ್ಕಿಂತ ಹೆಚ್ಚು ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯ್ತಿ ನೀಡಲಾಗುತ್ತದೆ. ಅಲ್ಲದೆ ಹೋಗುವ ಮತ್ತು ಬರುವ ಟಿಕೆಟ್‍ನನ್ನು ಒಟ್ಟಿಗೆ ಕಾಯ್ದಿರಿಸಿದರೆ ಶೇ.10ರಷ್ಟು ರಿಯಾಯ್ತಿ ದೊರೆಯಲಿದೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin