ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ : ಮಹಾರಾಜ ಯದುವೀರ್

ಈ ಸುದ್ದಿಯನ್ನು ಶೇರ್ ಮಾಡಿ

Yaduveer--01ಹಾಸನ, ಸೆ.8- ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ. ಸದ್ಯಕ್ಕೆ ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಮೈಸೂರು ರಾಜವಂಶಸ್ಥ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಾಗಿ ಮಾಧ್ಯಮಗಳಿಂದ ತಿಳಿದಿದೆ. ಇದೆಲ್ಲ ಸುಳ್ಳು. ರಾಜಕೀಯ ಸೇರುವುದು ಕೇವಲ ಊಹಾಪೋಹ ಎಂದು ಹೇಳಿದರು.

ಜನಸೇವೆ ಮಾಡಲು ಬೇಕಾದಷ್ಟು ದಾರಿಗಳಿವೆ. ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜನರ ಸೇವೆ ಮಾಡಬಹದು ಎಂದ ಅವರು, ರಾಜಮನೆತನದ ಪರಂಪರೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಸಮರ್ಥವಾಗಿ ಉಳಿಸಿಕೊಂಡು ಹೋಗುತ್ತೇನೆ. ಈ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ರಾಜವಂಶಸ್ಥರಿಗೆ ಸರ್ಕಾರದಿಂದ ಗೌರವಧನ ನಿಷೇಧಿಸಬೇಕೆಂಬ ನಂಜರಾಜ ಅರಸು ಅವರ ಹೇಳಿಕೆ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ, ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಮೈಸೂರು ರಾಜಮನೆತನದ ಆಡಳಿತ ಮಂಡಳಿ ನೋಡಿ ಕೊಳ್ಳಲಿದೆ ಎಂದು ಉತ್ತರಿಸಿದರು. ಭಾರೀ ಮಳೆಯಿಂದ ಪ್ರವಾಹ ಉಂಟಾಗಿರುವ ಕೊಡಗು ಜಿಲ್ಲೆಗೆ ಶೀಘ್ರವೇ ಭೇಟಿ ನೀಡುತ್ತೇನೆ ಎಂದು ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

Facebook Comments

Sri Raghav

Admin