ಕೇಂದ್ರದ ವಿರುದ್ಧ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Manamohan-SIngh----01

ನವದೆಹಲಿ, ಸೆ.8-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.  ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಳಧನ ನಿಗ್ರಹ, ನೋಟು ಅಮಾನ್ಯೀಕರಣ ನಿಭಾವಣೆ ಹಾಗೂ ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು.

ದೇಶದಲ್ಲಿ ಏಕಪಕ್ಷೀಯವಾಗಿ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಪದ್ಧತಿ ಜಾರಿಗೊಳಿಸಿದ್ದರಿಂದ ಅನೇಕ ಉದ್ಯಮಿಗಳು ದಿವಾಳಿಯಾರಿದ್ದಾರೆ. ಅಲ್ಲದೇ ಉದ್ದಿಮೆಗಳ ಮೇಲೆ ದುಷ್ಪರಿಣಾಮ ಉಂಟಾಗಿದೆ. ಇದರಿಂದ ರಾಷ್ಟ್ರದಲ್ಲಿ ನಿರುದ್ಯೋಗ ಸೃಷ್ಟಿಯಾಗಿದೆ ಎಂದು ಮಾಜಿ ಪ್ರಧಾನಿ ಆರೋಪಿಸಿದರು.

ಪ್ರಧಾನಿ ಮೋದಿ ಅವರು ಈ ಹಿಂದೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ ಅದು ಈವರೆಗೆ ಈಡೇರಿಲ್ಲ. ದೇಶದ ನಿರುದ್ಯೋಗಿ ಯುವಕರು ಅದಕ್ಕಾಗಿ ಕಾಯುತ್ತಾ ಕುಳಿಸಿದ್ದಾರೆ ಎಂದು ದೂರಿದರು.

Facebook Comments

Sri Raghav

Admin