ಸನ್ನಡತೆ ಆಧಾರದ ಮೇಲೆ 79 ಕೈದಿಗಳಿಗೆ ನಾಳೆ ಬಿಡುಗಡೆ ಭಾಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

Jail--01

ಬೆಂಗಳೂರು, ಸೆ.8- ಸನ್ನಡತೆಯ ಆಧಾರದಲ್ಲಿ 79 ಕೈದಿಗಳನ್ನು ನಾಳೆ ಸರ್ಕಾರ ಬಿಡುಗಡೆ ಮಾಡಲಿದೆ.  ನಾಳೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸನ್ನಡತೆಯ ಕೈದಿಗಳು ಜೈಲಿನಿಂದ ಹೊರ ಬರಲಿದ್ದಾರೆ. ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಕಾರಗೃಹ ಎಡಿಜಿಪಿ ಮೆಘರಿಕ್ ಸೇರಿದಂತೆ ಹಲವು ಅಧಿಕಾರಿಗಳು ನಾಳಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು ಕೇಂದ್ರ ಕಾರಾಗೃಹ ಹಾಗೂ ವಿವಿಧ ಕಾರಾಗೃಹಗಳಲ್ಲಿನ ಕೈದಿಗಳೂ ಸೇರಿದಂತೆ 79 ಸನ್ನಡತೆಯ ಕೈದಿಗಳನ್ನು ನಾಳೆ ಬಿಡುಗಡೆ ಮಾಡಲಾಗುವುದು. ಸಂಪ್ರದಾಯದಂತೆ ಆ.15ರ ಸ್ವಾತಂತ್ರ್ಯೋತ್ಸವ ಹಾಗೂ ಜ.26ರ ಗಣರಾಜ್ಯೋತ್ಸವದಂದು ಸನ್ನಡತೆಯ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ಸನ್ನಡತೆಯ ಕೈದಿಗಳನ್ನು ಬಿಡುಗಡೆ ಮಾಡಿರಲಿಲ್ಲ. ಹಾಗಾಗಿ ಈ ತಿಂಗಳಲ್ಲಿ ಅಂದರೆ ನಾಳೆ ಸನ್ನಡತೆಯ ಕೈದಿಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

Facebook Comments

Sri Raghav

Admin