ಧಾರವಾಡದ ಕೃಷಿ ವಿವಿಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

agrical-dharwada-1
ಧಾರವಾಡದ ಕೃಷಿ ವಿಶ್ವವಿದ್ಯಾಲಯ (ಯುಎಎಸ್) ದಲ್ಲಿನ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ನಿಗದಿತ ನಮೂನೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 10
ಹುದ್ದೆಗಳ ವಿವರ
ತಾಂತ್ರಿಕ ಸಹಾಯಕ ಹುದ್ದೆಗಳು
ವಿದ್ಯಾಭ್ಯಾಸ : ಕೃಷಿ ಮತ್ತು ಅರಣ್ಯ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರ ಹಿಂದುಳಿದ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ ದವರಿಗೆ ಗರಿಷ್ಠ 40 ವರ್ಷದವರೆಗೆ ಸಡಿಲತೆ ನೀಡಲಾಗಿದೆ.
ಸಂದರ್ಶನ ನಡೆಯುವ ದಿನಾಂಕ : 19-09-2018 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ಪ್ರಾರಂಭವಾಗಲಿದೆ.
ಸಂದರ್ಶನ ನಡೆಯುವ ಸ್ಥಳ : ಡಿನ್ (ಸ್ನಾತಕೋತ್ತರ) ರವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ – 580005 ಇಲ್ಲಿ ನೇರ ಸಂದರ್ಶನ ಹಾಜರಾಗುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  www.uasd.edu  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin