ಪ್ರಧಾನಿ ಬಳಿಗೆ ತೆರಳುವ ನಿಯೋಗಕ್ಕೆ ಆಹ್ವಾನ ನೀಡದಿದ್ದಕ್ಕೆ ಅಪ್ಪಚ್ಚುರಂಜನ್ ಬೇಸರ

ಈ ಸುದ್ದಿಯನ್ನು ಶೇರ್ ಮಾಡಿ

Appachu-Ranjan
ಮಡಿಕೇರಿ, ಸೆ.9- ಅತಿವೃಷ್ಠಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕೋರಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ತೆರಳುವ ನಿಯೋಗಕ್ಕೆ ಆಹ್ವಾನ ನೀಡಿಲ್ಲವೆಂದು ಮಡಿಕೇರಿ ಶಾಸಕ ಅಪ್ಪಚ್ಚುರಂಜನ್ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದೆ. ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿದೆ. ಸಾವು-ನೋವು ಸಂಭವಿಸಿದೆ. ಆದರೆ, ಜಿಲ್ಲೆಯ ಜನಪ್ರತಿನಿಧಿಗಳೇ ಪ್ರಧಾನಿ ಭೇಟಿಗೆ ಆಹ್ವಾನಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ನೇತೃತ್ವದಲ್ಲಿ ಪ್ರತ್ಯೇಕ ನಿಯೋಗದಲ್ಲಿ ತೆರಳಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ಹಾಗೂ ಪ್ರಧಾನಿ ಅವರನ್ನು ಭೇಟಿಯಾಗುವುದಾಗಿಯೂ ಕೊಡಗಿನ ಮರು ನಿರ್ಮಾಣಕ್ಕೆ ಪರಿಹಾರ ನೀಡುವಂತೆ ಕೋರುವುದಾಗಿ ಅವರು ತಿಳಿಸಿದ್ದಾರೆ.

Facebook Comments

Sri Raghav

Admin