ಬಿಬಿಎಂಪಿ ಕಾರ್ಪೋರೇಟರ್‍ಗಳು, ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

ಈ ಸುದ್ದಿಯನ್ನು ಶೇರ್ ಮಾಡಿ

ACB--01
ಬೆಂಗಳೂರು, ಸೆ.8-ಖಾಸಗಿ ಸುದ್ದಿವಾಹಿನಿಯೊಂದರ ವರದಿಗಾರ ರೊಬ್ಬರು ನೀಡಿದ ದೂರು ಆಧರಿಸಿ ಭ್ರಷ್ಟಾಚಾರ ನಿಗ್ರಹ ದಳ ಬಿಬಿಎಂಪಿಯ ನಗರ ಯೋಜನಾ ಸಮಿತಿಯ ಅಧ್ಯಕ್ಷ ಶಕೀಲ್ ಅಹ್ಮದ್ , ಮೂವರು ಬಿಬಿಎಂಪಿ ಕಾರ್ಪೋರೇಟರ್‍ಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ. ಕಾರ್ಪೋರೇಟರ್‍ಗಳಾದ ಎನ್.ನಾಗರಾಜ್, ಜಿ.ಕೆ.ವೆಂಕಟೇಶ್, ಬಿಬಿಎಂಪಿ ಅಧಿಕಾರಿ ಗುರುರಾಜ್ ಹಾಗೂ ಚಕ್ರವರ್ತಿ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ನಿರ್ಮಿತ ಕಟ್ಟಡದ ಭಾಗವನ್ನು ಸಕ್ರಮಗೊಳಿಸಲು ಲಂಚದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಆರೋಪಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಸಂಭಾಷಣೆಯ ವೀಡಿಯೋವನ್ನು ಲಗತ್ತಿಸಿ, ಎಸಿಬಿಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Facebook Comments

Sri Raghav

Admin