2022ರ ವೇಳೆಗೆ ನವಭಾರತ ನಿರ್ಮಾಣಕ್ಕೆ ಬಿಜೆಪಿ ಸಂಕಲ್ಪ

ಈ ಸುದ್ದಿಯನ್ನು ಶೇರ್ ಮಾಡಿ

BJP

ನವದೆಹಲಿ, ಸೆ.9 (ಪಿಟಿಐ)- ಮುಂದಿನ 2022ರ ವೇಳೆಗೆ ನವಭಾರತ ನಿರ್ಮಾಣಕ್ಕಾಗಿ ಭಾರತೀಯ ಜನತಾ ಪಕ್ಷ ಇಂದು ದೃಢಸಂಕಲ್ಪ ಮಾಡಿದೆ. ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನವಾದ ಇಂದು ಕೆಲವು ಮಹತ್ವದ ರಾಜಕೀಯ ನಿರ್ಣಯಗಳನ್ನು ಕೈಗೊಳ್ಳಲಾಯಿತು. ನವಭಾರತವು ಭಯೋತ್ಪಾದನೆ, ಭಷ್ಟಾಚಾರ ಮತ್ತು ಬಡತನ ಮುಕ್ತವಾಗಿರಬೇಕೆಂಬ ನಿರ್ಣಯವನ್ನು ಇಂದು ಅಂಗೀಕರಿಸಲಾಗಿದೆ.
ಪ್ರಧಾನಿ ನರೇಂದ ಮೋದಿ ಅವರ ನೇತೃತ್ವದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲೂ ಉತ್ತಮ ಫಲಿತಾಂಶದೊಂದಿಗೆ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೇರಲು ಎಲ್ಲರೂ ಒಗ್ಗೂಡಿ ಶ್ರಮಿಸುವ ಗೊತ್ತುವಳಿಯನ್ನು ಇಂದಿನ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಪ್ರಧಾನಮಂತ್ರಿಯವರು ಈಗಾಗಲೇ 2022ರ ವೇಳೆಗೆ ನವಭಾರತ ನಿರ್ಮಾಣದ ಸಂಕಲ್ಪ ಮಾಡಿದ್ದಾರೆ. ಅದನ್ನು ಅನುಷ್ಠಾನಗೊಳಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೆಲ್ಲರೂ ಶ್ರಮಿಸುವ ನಿರ್ಣಯವನ್ನು ಪ್ರಮುಖವಾಗಿ ಅಂಗೀಕರಿಸಲಾಗಿದೆ. ನಿರ್ಣಯಗಳ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕೇಂದ್ರ ಸರ್ಕಾರದ ಯಶಸ್ವಿ ಕಾರ್ಯಕ್ರಮಗಳು ಮತ್ತು ಸಾಧನೆಗಳಿಂದ ಪ್ರತಿಪಕ್ಷಗಳು ಮಂಕಾಗಿವೆ. ವಿರೋಧ ಪಕ್ಷಗಳಲ್ಲಿ ಒಬ್ಬ ಸಮರ್ಥ ನಾಯಕ ಅಥವಾ ನೀತಿ ಇಲ್ಲ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟುವುದು ಅವರ ಏಕ ಅಂಶದ ಕಾರ್ಯಕ್ರಮವಾಗಿದೆ ಎಂದು ಲೇವಡಿ ಮಾಡಿದರು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ನಿನ್ನೆಯಿಂದ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಾಜಿ ಉಪಪ್ರಧಾನಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ಅಜೇಯ ಭಾರತ ಘೋಷಣೆಯೊಂದಿಗೆ ಮುಂದಿನ ಸಾರ್ವತ್ರಿಕ ಚುನಾವಣೆಗಾಗಿ ಬಿಜೆಪಿ ಹೊಸ ರಣತಂತ್ರ ರೂಪಿಸಿದೆ.

Facebook Comments

Sri Raghav

Admin