ಸರ್ಕಾರ ಬೀಳಿಸುವ ಪ್ರಯತ್ನ ಮಾಡಲ್ಲ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-01
ಬೆಂಗಳೂರು, ಸೆ.9- ರಾಜ್ಯ ಸರ್ಕಾರವನ್ನು ಕೆಡವಲು ಬಿಜೆಪಿ ಪ್ರಯತ್ನಿಸುವುದಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರು ಏಕೆ ಆತಂಕ ಪಡುತ್ತಿದ್ದಾರೆ ಎಂಬುದು ಆ ಭಗವಂತನಿಗೇ ಗೊತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉರುಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ.

ಆದರೆ ಕಾಂಗ್ರೆಸ್‍ನ ಹಲವು ಪ್ರಮುಖ ನಾಯಕರು ಬಿಜೆಪಿ ಸೇರುತ್ತಾರೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ನಾವು ಅಣಿಯಾಗುತ್ತಿದ್ದೇವೆ. ಈಗಾಗಲೇ ಚುನಾವಣಾ ಸಿದ್ಧತೆಗಳು ಆರಂಭವಾಗಿವೆ ಎಂದು ಅವರು ಹೇಳಿದರು. ಪಕ್ಷದ ಕೆಲವು ನಾಯಕರು ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸಿದ್ದಾರೆ. ತಾವು ಕೂಡ ಸದ್ಯದಲ್ಲೇ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಿನ್ನೆ ದೆಹಲಿಗೆ ಹೋಗಿ ಬಂದಿದ್ದೇನೆ, ಮತ್ತೆ ಹೋಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲೋಕಸಭೆ ಚುನಾವಣೆಗೂ ಮೊದಲೇ ಮೈತ್ರಿ ಸರ್ಕಾರಕ್ಕೆ ಭಯ ಆರಂಭವಾಗಿದೆ. ಬೆಳಗಾವಿ ರಾಜಕೀಯದಿಂದ ಸರ್ಕಾರಕ್ಕೆ ಆಪತ್ತು ಬರುವ ಲಕ್ಷಣ ಕಾಣುತ್ತಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin