ಭಾರತ್ ಬಂದ್ ಎಫೆಕ್ಟ್ : ಸರ್ಕಾರಿ ಕಚೇರಿಗಳು ತೆರೆದಿದ್ದರೂ ಸಿಬ್ಬಂದಿಗಳಿರಲಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Mandya-Congress-Bharata-Bha

ಮಂಡ್ಯ, ಸೆ.10-ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಖಂಡಿಸಿ ಇಂದು ಕರೆ ನೀಡಿದ್ದ ಭಾರತ್ ಬಂದ್ ಭಾಗಶಃ ಯಶಸ್ವಿಯಾಯಿತು. ತೈಲ ಬೆಲೆ ಏರಿಕೆ ಖಂಡಿಸಿ ಖಾಸಗಿ ಬಸ್ ಮಾಲೀಕರು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದರು. ಕೆಎಸ್‍ಆರ್‍ಟಿಸಿ ಬಸ್‍ಗಳು ಸಂಚರಿಸದ ಕಾರಣ ಪ್ರಯಾಣಿಕರು ಪರದಾಡಿದರು.
ಶಾಲೆ, ಕಾಲೇಜು, ಚಿತ್ರಮಂದಿರಗಳು ಮುಚ್ಚಿದ್ದವು. ಸರ್ಕಾರಿ ಕಚೇರಿಗಳು ತೆರೆದಿದ್ದರೂ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾತ್ರ ಕೆಲಸಕ್ಕೆ ಹಾಜರಾಗಿದ್ದರು.
ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ, ನಗರ ಅಧ್ಯಕ್ಷ ಜಗದೀಶ್, ಮುಖಂಡ ರಾಮಲಿಂಗಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ಸೈಕಲ್‍ನಲ್ಲಿ ಮೆರವಣಿಗೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಚಲುವರಾಯಸ್ವಾಮಿ, ಮುಖಂಡ ಗಾಣಿಗ ರವಿ, ನಗರಸಭಾ ಸದಸ್ಯ ರಾಮಲಿಂಗಯ್ಯ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರವಿಂದಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕೆಲವರು ಬೈಕ್‍ನಲ್ಲಿ ಮೆರವಣಿಗೆ ನಡೆಸಿದರೆ, ಇನ್ನು ಕೆಲವರು ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಮೂಲಕ ಬಂದ್‍ಗೆ ಸಹಕರಿಸಬೇಕೆಂದು ಮನವಿ ಮಾಡುತ್ತಿದ್ದುದು ಕಂಡುಬಂದಿತು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Facebook Comments

Sri Raghav

Admin