ಭಾರತ್ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ, ಕಾಂಗ್ರೆಸ್‍ ಷಡ್ಯಂತ್ರ ಬಯಲಾಗಿದೆ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

yadiyurappa
ಬೆಂಗಳೂರು, ಸೆ.10- ತೈಲ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಇಂದು ಕಾಂಗ್ರೆಸ್ ನೀಡಿರುವ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ. ಕರ್ನಾಟಕದಲ್ಲೂ ಬಂದ್‍ಗೆ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಕಾಂಗ್ರೆಸ್-ಜೆಡಿಎಸ್ ಅಧಿಕಾರ ದುರುಪಯೋಗಪಡಿಸಿ ಕೊಂಡು ಕೆಲವು ಕಡೆ ಬಲವಂತವಾಗಿ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವ ಕುತಂತ್ರ ಮಾಡುತ್ತಿವೆ. ಇದು ಕೇಂದ್ರದ ವಿರುದ್ಧ ಷಡ್ಯಂತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.  ಪೆಟ್ರೋಲ್, ಡೀಸೆಲ್ ಹೆಚ್ಚಳವಾಗಲು ಕಾರಣವೇನೆಂಬುದು ಜಗತ್ತಿಗೆ ಗೊತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಸಹಿಸದ ವಿರೋಧ ಪಕ್ಷಗಳು ಈ ರೀತಿ ಬಂದ್‍ಗೆ ಕರೆ ಕೊಡುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಸಾರ್ವಜನಿಕರು ಇದಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

Facebook Comments

Sri Raghav

Admin