ಮೀರತ್-ದೆಹಲಿಯಲ್ಲಿ ಲಘು ಭೂಕಂಪ

ಈ ಸುದ್ದಿಯನ್ನು ಶೇರ್ ಮಾಡಿ

Earthquake--01
ನವದೆಹಲಿ,ಸೆ.10- ಉತ್ತರ ಪ್ರದೇಶದ ಮೀರಠ್ ಜಿಲ್ಲೆ ಖಾರ್ಕೋಡದಲ್ಲಿ ಇಂದು ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪ ತೀವ್ರತೆ 3.6ರಷ್ಟು ತೀವ್ರತೆ ಕಂಡುಬಂದಿದೆ. ದೆಹಲಿಯಲ್ಲೂ ಭೂಕಂಪನದ ಅನುಭವವಾಗಿದೆ. ಬೆಳಿಗ್ಗೆ 6.28ರ ವೇಳೆಗೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಉತ್ತರ ಪ್ರದೇಶದ ಹಲವೆಡೆಗಳಲ್ಲಿ ಕೂಡಾ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು ನೋವು ಅಥವಾ ಆಸ್ತಿಪಾಸ್ತಿ ನಷ್ಟದ ವಿವರಗಳು ಬಂದಿಲ್ಲ. ಹರಿಯಾಣದ ಝಜ್ಜಾರ್ ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 3.8ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ 24 ಗಂಟೆಯೊಳಗೆ ಪಕ್ಕದಲ್ಲೇ ಮತ್ತೆ ಭೂಕಂಪವಾಗಿರುವುದು ಆತಂಕಕಕ್ಕೆ ಕಾರಣವಾಗಿದೆ. ನಿನ್ನೆ ಸಂಜೆ 4.37ಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

Facebook Comments

Sri Raghav

Admin