ಪ್ರಧಾನಿ ಮೋದಿ ರಾಜೀನಾಮೆಗೆ ವಿಶ್ವನಾಥ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

H-Vishwanath
ಮೈಸೂರು, ಸೆ.10-ದೇಶದಲ್ಲಿ ಎಲ್ಲ ಕ್ಷೇತ್ರದಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಶಾಸಕ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದ ಗಾಂಧಿ ಸ್ಕ್ವೇರ್‍ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಗ್ಯಾಸ್ ಸಿಲಿಂಡರ್ ದರ ಸಾವಿರ ರೂ. ತಲುಪಲಿದೆ. ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತಿದೆ. ಕೈಗಾರಿಕೆ, ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಕೇಂದ್ರ ಸರ್ಕಾರ ವಿಫಲವಾಗಿದೆ. ಹಾಗಾಗಿ ಮೋದಿಯವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವೈಶಂಪಾಯನ ಸರೋವರದಲ್ಲಿ ದುರ್ಯೋಧನ ಅವಿತಿಟ್ಟುಕೊಂಡಂತೆ ಬಿಜೆಪಿ ಮುಖಂಡರು ಇದ್ದಾರೆ. ಹೊರಬಂದು ತೈಲ ಬೆಲೆ ಏರಿಕೆ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ತೈಲ ಬೆಲೆ ಏರಿಕೆ ಖಂಡಿಸಿ ತಲೆ ಮೇಲೆ ಖಾಲಿ ಸಿಲಿಂಡರ್ ಇಟ್ಟು ಪ್ರತಿಭಟನೆ ಮಾಡಿದ್ದರು. ಈಗ ನಿರಂತರವಾಗಿ ಬೆಲೆ ಏರುತ್ತಿದ್ದರೂ ಅವರು ಏಕೆ ಮಾತನಾಡುತ್ತಿಲ್ಲ ಎಂದು ವಿಶ್ವನಾಥ್ ಪ್ರಶ್ನಿಸಿದರು.

Facebook Comments

Sri Raghav

Admin